HomeKarnatakaಇನ್ನು ಅರ್ಜಿ ಆಹ್ವಾನಿಸದೆ ನೇರವಾಗಿ ಅರ್ಹರ ಮನೆ ಬಾಗಿಲಿಗೆ 'ರಾಜ್ಯೋತ್ಸವ ಪ್ರಶಸ್ತಿ': ಹೊಸ ಅಧ್ಯಾಯ ಆರಂಭಕ್ಕೆ...

ಇನ್ನು ಅರ್ಜಿ ಆಹ್ವಾನಿಸದೆ ನೇರವಾಗಿ ಅರ್ಹರ ಮನೆ ಬಾಗಿಲಿಗೆ ‘ರಾಜ್ಯೋತ್ಸವ ಪ್ರಶಸ್ತಿ’: ಹೊಸ ಅಧ್ಯಾಯ ಆರಂಭಕ್ಕೆ ಚಿಂತನೆ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಸ್ವೀಕರಿಸದೆ ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಅವರ ಮನೆ ಬಾಗಿಲಿಗೆ ಹೋಗಿ ನೀಡುವ ಹೊಸ ಅಧ್ಯಾಯ ಆರಂಭಿಸುವ ಚಿಂತನೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದ್ದಾರೆ.

ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಮತ್ತು ಪುಸ್ತಕ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಪ್ರಶಸ್ತಿಯನ್ನು ಕೇಳಿ ಪಡೆಯಬಾರದು, ಸಾಧಕರ ಸಾಧನೆಯನ್ನು ಗುರುತಿಸಿ ಹುಡುಕಿ ಪ್ರಶಸ್ತಿಯನ್ನು ಅವರ ಮನೆ ಬಾಗಿಲಿಗೆ ನೀಡಿ ಗೌರವಿಸುವಂತಾಗಬೇಕು. ಇದು ಪ್ರಶಸ್ತಿಯ ಮೌಲ್ಯ ಹೆಚ್ಚಿಸುತ್ತದೆ. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಶಸ್ತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಡಿನ ಸಾಹಿತಿಗಳು ಇನ್ನಷ್ಟು ಉತ್ತಮ ಸಲಹೆ ನೀಡಬೇಕು. ಅರ್ಜಿ ಸ್ವೀಕರಿಸದೇ ಪ್ರಶಸ್ತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಚರ್ಚೆಯಾಗಬೇಕು. ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯ ಪರಿಪಾಲಿಸಿಕೊಂಡು ಅರ್ಹರನ್ನು ಗುರುತಿಸುವಂತಹಾಗಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular