ಬೆಳಗಾವಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಯುಗಾದಿ ಹಬ್ಬದ ಹೊತ್ತಲ್ಲಿ 2 ತಿಂಗಳ ಹಣ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಮಾರ್ಚ್ 31ರ ನಂತರ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಎರಡು ತಿಂಗಳ ಹಣ ಜಮಾ ಆಗಲಿದೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗಿತ್ತು. ನಂತರ ಯಾವುದೇ ಸರ್ಕಾರಗಳು ಗೌರವಧನ ಹೆಚ್ಚಳ ಮಾಡಿರಲಿಲ್ಲ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು 1,000 ರೂ., ಸಹಾಯಕಿರ ಗೌರವಧನವನ್ನು 750 ರೂಪಾಯಿ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದು, ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.