
ಬೆಳಗಾವಿ: ಕನ್ನಡಪರ ಹೋರಾಟಗಾರರನ್ನು ಅವಾಚ್ಯವಾಗಿ ನಿಂದಿಸಿ, ಸಾಮಾಜಿಕ ಜಾಲತಾಣಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಎಂಇಎಸ್ ಮುಖಂಡ ಶುಭಂ ಶಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಹಾಗೂ ಕನ್ನಡ ನೆಲ-ಜಲ-ಭಾಷೆ ರಕ್ಷಣೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನಡೆದಿಸಿದ್ದ ಹೋರಾಟ, ಪ್ರತಿಭಟನೆ ಬಗ್ಗೆ ಅಪಹಾಸ್ಯ ಮಾಡಿದ್ದ ಎಂಇಎಸ್ ಮುಖಂಡ ಶುಬಂ ಶಳಕೆ, ಕನ್ನಡಪರ ಹೋರಾಟಗಾರರನ್ನು ಅವಾಚ್ಯವಾಗಿ ನಿಂದಿಸಿದ್ದ. ಈ ಹಿನ್ನೆಲೆಯಲ್ಲಿ ಶುಬಂ ಶಳಕೆ ವಿರುದ್ಧ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ BNS ಕಾಯ್ದೆ 192, 352, 353 ಸೆಕ್ಷನ್ ಅಡಿ FIR ದಾಖಲಾಗಿತ್ತು.
ಕೇಸ್ ದಾಖಲಾಗುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಬೆಳಗಾವಿ ಪೊಲೀಸರು ಶುಭಂ ಶಳಕೆಯನ್ನು ಬಂಧಿಸಿ ನ್ಯಾಯಾಧೀಸರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಶುಭಂ ಶಳಕೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಶಳಕೆ ಹಿಂಡಲಗಾ ಜೈಲು ಪಾಲಾಗಿದ್ದಾನೆ.