ಚಾಮರಾಜನಗರ : ಚಾಮರಾಜನಗರದಲ್ಲಿ ಕೆಎಸ್ ಆರ್ ಟಿಸಿ ಬಸ್ –ಟಾಟಾ ಏಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಮರಾಜನಗರದ ಕೊಳ್ಖೇಗಾಲದಲ್ಲಿ ಈ ಘಟನೆ ನಡೆದಿದಿದೆ. ಕೆಎಸ್ ಆರ್ ಟಿಸಿ ಬಸ್ –ಟಾಟಾ ಏಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತರನ್ನು ಬಾಣೂರು ಗ್ರಾಮದ ರಾಜಮ್ಮ, ಶೃತಿ ಎಂದು ಗುರುತಿಸಲಾಗಿದೆ. ಕೊಳ್ಳೇಗಾಲದಲ್ಲಿ ನಡೆದ ತಿಥಿ ಕಾರ್ಯಕ್ಕೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.