
ತುಮಕೂರು: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದು, ಸ್ಥಳದಲ್ಲೇ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.
ವರುಣ್ (5) ಮೃತ ಬಾಲಕ. ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಾಲಕನ ಮೇಲೆಯೇ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ವೈ.ಎನ್.ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.