
ಬೆಂಗಳೂರು: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ ಮಹಾಶಯ ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬೆಂಗಳೂರಿನ ಹೆಗ್ಗಡೆ ನಗರದಲ್ಲಿ ನಡೆದಿದೆ.
ಮೇಲಾರಮಣಿ (35) ಕೊಲೆಯಾದ ಮಹಿಳೆ. ಚಂದ್ರಶೇಖರ್ ಪತ್ನಿಯನ್ನೇ ಕೊಲೆಗೈದ ಪತಿ. ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದ ಪತ್ನಿ ಯಾವಾಗಲೂ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಹೆಂಡತಿ ಮೇಲೆ ಅನುಮಾನಗೊಂಡು ಆಕೆಯನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾನೆ.
ಮೇಲಾರಮಣಿ ಹಾಗೂ ಚಂದ್ರಶೇಖರ್ 11 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು. ಚಂದ್ರಶೇಖರ್ ಡ್ರೈವರ್ ಕೆಲಸ ಮಾಡುತ್ತಿದ್ದ. ಮೇಲಾರಮಣಿ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದರು. ಪತ್ನಿ ಫೋನ್ ನಲ್ಲಿ ಮಾತನಾಡುತ್ತಿರುವುದಕ್ಕೆ ಚಂದ್ರಶೇಖರ್ ಆಕೆಯ ಮೇಲೆ ಸಂಶಯಗೊಂಡಿದ್ದ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಜಗಳವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಚಂದ್ರಶೇಖರ್ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿದ್ದಾನೆ.
ಬಳಿಕ ಸಂಪಿಗೆಹಳ್ಳಿ ಪೊಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.