ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಯತ್ನಾಳ್ ರನ್ನು 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಫೆ.10 ರಂದು ಯತ್ನಾಳ್ ಗೆ ನೋಟಿಸ್ ನೀಡಲಾಗಿತ್ತು. ನೋಟಿಸ್ ಗೆ ಉತ್ತರ ನೀಡದ ಹಿನ್ನೆಲೆ ಬಿಜೆಪಿ ಪಕ್ಷದಿಂದ ಶಾಸಕ ಯತ್ನಾಳ್ ರನ್ನು 6 ವರ್ಷ ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಈ ಆದೇಶ ಹೊರಡಿಸಿದೆ.
ಬಿಜೆಪಿ ನಾಯಕರ ವಿರುದ್ಧ ಹಾಗೂ ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದ ಬಸನಗೌಡ ಪಾಟೀಲ್ ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಯತ್ನಾಳ್ ರನ್ನು ಉಚ್ಚಾಟನೆ ಮಾಡುವಂತೆ ಕೆಲವು ಬಿಜೆಪಿ ನಾಯಕರು ಕೂಡ ಆಗ್ರಹಿಸಿದ್ದರು.