
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಹಳೆ ಏರ್ ಪೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಸಿಗ್ನಲ್ ಬಳಿ ಘಟನೆ ನಡೆದಿದೆ.
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಗ್ನಲ್ ನಲ್ಲಿ ಬೈಕ್ ಸವಾರ ಯುಟರ್ನ್ ತೆಗೆದುಕೊಂಡಿದ್ದ. ಡಿವೈಡರ್ ಕ್ರಾಸ್ ಮಾಡಿ ಪಾದ ಜಾರಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಬಿಎಂಟಿಸಿ ಬಸ್ ಹಿಂದಿನಿಂದ ಬೈಕ್ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಸವಾರನ ಮೇಲೆ ಹರಿದಿದೆ. ಪಾದಚಾರಿ ಮೇಲೆಯೂ ಬಸ್ ಹರಿದಿದ್ದು, ಘಟನೆಯ ನಂತರ ಚಾಲಕ, ನಿರ್ವಾಹಕ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಜೀವನ್ ಭಿಮಾ ನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.