HomeKarnatakaರಾಜ್ಯದಲ್ಲಿ ಇನ್ನೂ ಎರಡು ಗುಡುಗು ಸಹಿತ ದಿನ ಮಳೆ, ನಂತರ ಒಣಹವೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇನ್ನೂ ಎರಡು ಗುಡುಗು ಸಹಿತ ದಿನ ಮಳೆ, ನಂತರ ಒಣಹವೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ. ನಂತರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 27ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ.

ಮಾರ್ಚ್ 28ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ನಂತರದ ದಿನಗಳಲ್ಲಿ ರಾಜ್ಯಾದ್ಯಂತ ಒಣಹಾವೆ ಮುಂದುವರೆಯಲಿದೆ ಎಂದು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ ರಾಜ್ಯದ ಹಲವು ಕಡೆ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರ, ಗದಗ ಜಿಲ್ಲೆಯ ಶಿರಹಟ್ಟಿ, ಮೈಸೂರು ಜಿಲ್ಲೆ ಕೆಆರ್ ನಗರ, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್, ಜೋಯಿಡಾ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆ, ಉಡುಪಿ ಜಿಲ್ಲೆಯ ಕಾರ್ಕಳ, ಧಾರವಾಡ ಸೇರಿ ಹಲವಡೆ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular