ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ವೇಗದ ಬಸ್ಸೊಂದು ಬುಧವಾರ ರಾತ್ರಿ ಬನಿಹಾಲ್-ಕಾಜಿಗುಂಡ್ ನವಯುಗ್ ಸುರಂಗದೊಳಗೆ ಪಲ್ಟಿಯಾದ ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ.
ಸಿಸಿಟಿವಿ ದೃಶ್ಯಾವಳಿಯಲ್ಲಿ, ಬಸ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸುರಂಗದೊಳಗೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿರುವುದು ಕಂಡುಬಂದಿದೆ.
ಮಾಹಿತಿ ತಿಳಿದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಗೊಂಡವರನ್ನು ಕಾಜಿಗುಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಿಂದಾಗಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
A Jammu and Kashmir State Road Transport Corporation (SRTC) bus met with an accident inside the Banihal-Qazigund (Navyug) Tunnel while traveling from Jammu to Srinagar. The incident was captured on CCTV footage. At least 12 injured. #JammuAndKashmir pic.twitter.com/3EIq4B6hYQ
— Gulistan News (@GulistanNewsTV) March 26, 2025