alex Certify BIG NEWS: ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ, ಮಣ್ಣು ಕುಸಿದು ಕಾರ್ಮಿಕನಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ, ಮಣ್ಣು ಕುಸಿದು ಕಾರ್ಮಿಕನಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಮಣ್ಣು ಕುಸಿದು ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಗೊಂಡ ಕಾರ್ಮಿಕನನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದೆ. ಮಲ್ಲಪ್ಪ ಶಾಫ್ಟ್‌ನಲ್ಲಿ 2600 ಅಡಿ ಆಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಮಣ್ಣು ಕುಸಿದು ಬಿದ್ದಿದೆ.

ಇದರಿಂದ ಲಕ್ಷ್ಮಣ್ ತಲೆ ಮತ್ತು ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹಟ್ಟಿ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಲಕ್ಷ್ಮಣ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ದುರಂತದ ಬಗ್ಗೆ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...