ಬೆಂಗಳೂರು : ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ನಾಳೆ OOD ಸೌಲಭ್ಯ್ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಹಿಳಾ ನೌಕರರ ಪಾತ್ರ ಕುರಿತಾದ ಕಾರ್ಯಗಾರವನ್ನು ದಿನಾಂಕ: 28.03.2025 ರಂದು ಪೂರ್ವಾಹ್ನ 10.00 ಗಂಟೆಗೆ ಬಾಲಭವನ ಆವರಣದಲ್ಲಿರುವ ಆಡಿಟೋರಿಯಂ, ಬೆಂಗಳೂರು, ಇಲ್ಲಿ ಆಯೋಜಿಸಲಾಗಿದೆ.
ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಮಹಿಳಾ ಸರ್ಕಾರಿ ಅಧಿಕಾರಿ/ನೌಕರರು ವಿಶೇಷ ಅನುಮತಿಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಒದಗಿಸುವ ಆಧಾರದ ಮೇಲೆ ವಿಶೇಷ ಅನುಮತಿಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದು ಎಂಬ ಷರತ್ತಿಗೊಳಪಟ್ಟು ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಮಹಿಳಾ ಸರ್ಕಾರಿ ಅಧಿಕಾರಿ/ನೌಕರರಿಗೆ ದಿನಾಂಕ: 28.03.2025 ರಂದು ಒಂದು ದಿನದ ಓ.ಓ.ಡಿ. ಸೌಲಭ್ಯವನ್ನು ಮಂಜೂರು ಮಾಡಲಾಗಿದೆ. ಈ ಸುತ್ತೋಲೆಯನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ/57/ಸೇ-3/2025, ದಿನಾಂಕ: 26.03.2025 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ.
