ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4 ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.
ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ನಂದಿನಿ ಹಾಲಿನ ಬೆಲೆ ಏರಿಕೆ ಶಾಕ್ ನೀಡಿದೆ.
ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ನಿರಂತರವಾಗಿ ಬೇಡಿಕೆ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 4ರೂ. ಹೆಚ್ಚಳ ಮಾಡಲಾಗಿದೆ. ಈ ಮೂಲಕ ರೈತರು ಹಾಗೂ ಹಾಲು ಒಕ್ಕೂಟಗಳ ಮನವಿಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ನೀಲಿ ಪ್ಯಾಕೆಟ್ ಹಾಲು – 44 ರೂ.ದಿಂದ 48 ರೂ. ಏರಿಕೆ(ಪ್ರತಿ ಲೀಟರ್ಗೆ), ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ, ಸಮೃದ್ಧಿ ಹಾಲಿನ ಪ್ಯಾಕೆಟ್: 56 ರೂ. ನಿಂದ 60 ರೂ., ನಾರ್ಮಲ್ ಗ್ರೀನ್ ಹಾಲು: 52 ರೂ. ನಿಂದ 56 ರೂ. ಹೆಚ್ಚಳ ಆಗಿದೆ.