ಡಿಜಿಟಲ್ ಡೆಸ್ಕ್ : ಡಾ. ಬಿ.ಅರ್ ಅಂಬೇಡ್ಕರ್ ಜಯಂತಿ ಹಿನ್ನೆಲೆ ಏ. 14 ರಂದು ಕೇಂದ್ರ ಸರ್ಕಾರಿ ನೌಕರರಿಗೆ ರಜೆ ಘೋಷಣೆ ಮಾಡಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ 2025 ರ ಏಪ್ರಿಲ್ 14 ರಂದು (ಸೋಮವಾರ) ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ರಜಾದಿನವೆಂದು ಘೋಷಿಸಲು ನಿರ್ಧರಿಸಲಾಗಿದೆ.
ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು / ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಬಹುದು ಎಂದು ಅಧಿಸೂಚನೆ ಹೊರಡಿಸಲಾಗಿದೆ.
