ಬೆಂಗಳೂರು : ಒಂದೇ ದಿನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದ 2 ಜಿಲ್ಲೆಗಳಲ್ಲಿ ನಿನ್ನೆ ನಡೆದಿದೆ.
ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೋನಿ (15) ಎಂದು ಗುರುತಿಸಲಾಗಿದೆ.ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಪೋಷಕರು ಜಾಸ್ತಿ ಮೊಬೈಲ್ ನೋಡಬೇಡಾ..ಓದಿನ ಕಡೆ ಗಮನ ಕೊಡು ಎಂದು ಬುದ್ದಿವಾದ ಹೇಳಿದ್ದಾರೆ. ಅಷ್ಟಕ್ಕೇ ವಿದ್ಯಾರ್ಥಿನಿ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
8 ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಕೊಪ್ಪಳದಲ್ಲಿ ಓರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳದ ನಿರೀಕ್ಷಾ ಕಾರೇಕಲ್ ಎಂಬ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದಾರೆ.