ಬೆಂಗಳೂರು : ಕರ್ನಾಟಕದ ದಕ್ಷ ಪೊಲೀಸ್ ಅಧಿಕಾರಿ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್ ಗರುಡಾಚಾರ್ ಅವರು ಇಂದು ಶುಕ್ರವಾರ ಬೆಳಗ್ಗೆ ಮುಂಜಾನೆ ವಿಧಿವಶರಾದರು.
ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ಅವರು ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಟಾಧಿಕಾರಿಯಾಗಿ, ಬೆಂಗಳೂರು ಜಿಲ್ಲೆಯ ಎಸ್ ಪಿ ಹಾಗೂ ಬೆಂಗಳೂರು ನಗರದ ಡಿಸಿಪಿಯಾಗಿ , ಪೊಲೀಸ್ ಡಿಜಿ/ಐಜಿಪಿಯಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಮೃತರ ಅಂತ್ಯಸಂಸ್ಕಾರ ನಾಳೆ ವಿಲ್ಸನ್ ಗಾರ್ಡ್ ನ ವಿದ್ಯುತ್ ಚಿತಾಗಾರದಲ್ಲಿ ನಾಳೆ ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.