
ನಿನ್ನೆಯಷ್ಟೇ ಭಾರೀ ಪ್ರಬಲ ಭೂಕಂಪದಿಂದ ತತ್ತರಿಸಿದ್ದ ಮ್ಯಾನ್ಮಾರ್ ನಲ್ಲಿ ಮತ್ತೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.2ರಷ್ಟು ತೀವ್ರತೆ ದಾಖಲಾಗಿದೆ.
ನಿನ್ನೆಯಷ್ಟೇ ಸಂಭವಿಸಿದ ಪ್ರಬಲ ಭೂಕಂಪದಿಂದ ಮಯನ್ಮಾರ್ ಜನ ತತ್ತರಿಸಿ ಹೋಗಿದ್ದಾರೆ. ಮ್ಯಾನ್ಮಾರ್ನಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿದ್ದು, ಇಂದು ಕೂಡ 4.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.
ಮ್ಯಾನ್ಮಾರ್ ಬಳಿಕ ಅಫ್ಘಾನಿಸ್ತಾನ, ತಜಕಿಸ್ತಾನದಲ್ಲಿಯೂ ಇಂದು ಬೆಳಗಿನ ಜಾವ ಭೂಕಂಪ ಸಂಭವಿಸಿದೆ. ಆಫ್ಘಾನಿಸ್ತಾನದಲ್ಲಿ ಮುಂಜಾನೆ 4 51ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆ ದಾಖಲಾಗಿದೆ. ತಜಕಿಸ್ತಾನದಲ್ಲಿ 4.2ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
An earthquake with a magnitude of 4.7 on the Richter Scale hit Afghanistan at 5.16 IST today
(Source – National Center for Seismology) pic.twitter.com/PkfTSO1k6v
— ANI (@ANI) March 29, 2025