alex Certify BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಕೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಕೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2024 ಮತ್ತು 2025ನೇ ಸಾಲಿನ ಸರ್ಕಾರಿ ಅಧಿಕಾರಿ / ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಉಲ್ಲೇಖಿತ ಸುತ್ತೋಲೆಯಲ್ಲಿ ನಾಮ ನಿರ್ದೇಶನಗಳನ್ನು ದಿನಾಂಕ: 28-04-2025 ರೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ.

1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2023ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ / ಸಾಧನೆಯನ್ನು ಪರಿಗಣಿಸಲಾಗುವುದು. ಹಾಗೆಯೇ, 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2024ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು.

2. 2024 ಹಾಗೂ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್ಲೈನ್ನಲ್ಲಿ ನಾಮ ನಿರ್ದೇಶನವನ್ನು ಸಲ್ಲಿಸಲು ದಿನಾಂಕ: 14-04-2025 ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.

3. 2023ನೇ ಸಾಲಿನಲ್ಲಿ ಯಾವ ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಲ್ಲವೋ ಅವರೂ ಸಹ ಪ್ರಕ್ರಿಯೆಯನ್ನು ದಿನಾಂಕ: 16-04-2025 ರೊಳಗೆ ಪೂರ್ಣಗೊಳಿಸುವುದು ಮತ್ತು ಆಯ್ಕೆ ಪೂರ್ಣಗೊಂಡ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವುದು.

4. 2024 ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ಆಯ್ಕೆಯನ್ನು ಪೂರ್ಣಗೊಳಿಸಿ, ಪೂರ್ಣಗೊಂಡ ಎರಡು ವರ್ಷಗಳ ಆಯ್ಕೆ ಪಟ್ಟಿಯನ್ನು ದಿನಾಂಕ: 16-04-2025ರೊಳಗೆ ಸರ್ಕಾರಕ್ಕೆ ಸಲ್ಲಿಸುವುದು.

5. 2024 ಹಾಗೂ 2025ನೇ ಸಾಲಿನ ಎರಡು ವರ್ಷಗಳಿಗೆ ಪ್ರತಿ ವರ್ಷಕ್ಕೆ ತಲಾ ಇಬ್ಬರಂತೆ ಒಟ್ಟು 4 ಜನ ಅರ್ಹ ಅಧಿಕಾರಿ / ನೌಕರರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಪರಿಗಣಿಸಲು ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ನಾಮ ನಿರ್ದೇಶನಗಳನ್ನು ಸೂಕ್ತ ಶಿಫಾರಸ್ಸಿನೊಂದಿಗೆ ದಿನಾಂಕ: 16-04-2025 ರೊಳಗೆ ಸರ್ಕಾರಕ್ಕೆ ವಿಳಂಬವಿಲ್ಲದೇ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.

ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖಾ ಹಂತ / ನಿರ್ದೇಶಕರ ಹಂತ ಮತ್ತು ಸಚಿವಾಲಯ ಹಂತದ ಅರ್ಹ ಅಧಿಕಾರಿ / ನೌಕರರು ಸಹ ಆನ್ಲೈನ್ ಮೂಲಕ ರಾಜ್ಯ ಮಟ್ಟದ ಪ್ರಶಸ್ತಿಗೆ ದಿನಾಂಕ:14-04-2025 ರೊಳಗೆ ನಾಮ ನಿರ್ದೇಶನಗಳನ್ನು ಸಲ್ಲಿಸಬಹುದು.

7. ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನವನ್ನು ಆನ್ಲೈನ್ ಮೂಲಕ ಸಲ್ಲಿಸುವ ಬಗ್ಗೆ ತಮ್ಮ ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳುವುದು.

8. ಮೇಲ್ಕಂಡ ಆಯ್ಕೆ ಪ್ರಕ್ರಿಯೆಯನ್ನು ಈ ಹಿಂದಿನ ಸುತ್ತೋಲೆಯಲ್ಲಿ ತಿಳಿಸಿರುವಂತೆ ಜಿಲ್ಲಾವಾರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಅನುಮೋದನೆಯೊಂದಿಗೆ ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ)ಗೆ ಸಲ್ಲಿಸುವುದು.

9. ಸರ್ಕಾರದ ಆದೇಶ ಸಂ: ಸಿಆಸುಇ (ಆಸು) 11 ಇಆಸು 2022, ದಿನಾಂಕ: 19-03-2022ರ ಮಾರ್ಗಸೂಚಿಗಳನ್ನು ಅನುಸರಿಸತಕ್ಕದ್ದು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...