ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಾ.31 ರವರೆಗೆ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಯುಗಾದಿ ಜಾತ್ರೆ ಹಿನ್ನೆಲೆ ದ್ವಿಚಕ್ರ ವಾಹನ, ಆಟೋ ಮತ್ತು ಗೂಡ್ಸ್ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ . ಮೈಸೂರಿನಿಂದ ೧೫೦ ಕಿ ಮೀ ಹಾಗೂ ರಾಜಧಾನಿ ಬೆಂಗಳೂರಿನಿಂದ ೨೧೦ ಕಿ ಮೀ ದೂರವಿದೆ ಈ ಮಹದೇಶ್ವರ ಬೆಟ್ಟ. ಎಲ್ಲಾ ಸಮುದಾಯಕ್ಕೂ ಸೇರಿದ ಮಹದೇಶ್ವರ ದೇವಸ್ಥಾನ ಮುಖ್ಯವಾದ ಭಕ್ತಿಕೇಂದ್ರವಾಗಿದೆ ಹಾಗೂ ಶಿವನ ಆರಾಧಾನಾ ಕೇಂದ್ರವೂ ಕೂಡ ಆಗಿದೆ. ಪ್ರತೀ ವರ್ಷ ಕರ್ನಾಟಕ ಹಾಗೂ ತಮಿಳುನಾಡಿನ ಲಕ್ಷಾಂತರ ಭಕ್ತರನ್ನು ಮಹದೇಶ್ವರ ಬೆಟ್ಟ ಸೆಳೆಯುತ್ತದೆ. ಯುಗಾದಿ ಹಬ್ಬದಲ್ಲಿ ಸಾವಿರಾರು ಜನರು ಭಕ್ತರು ಇಲ್ಲಿಗೆ ಬರುತ್ತಾರೆ.