ಸುಕ್ಮಾ ಎನ್ಕೌಂಟರ್ : ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ (ಮಾರ್ಚ್ 29) ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆರ್ಲಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳೊಂದಿಗಿನ ಎನ್ಕೌಂಟರ್ನಲ್ಲಿ ಕನಿಷ್ಠ 16 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಐಜಿ ಸುಂದರ್ರಾಜ್ ಪಿ ತಿಳಿಸಿದ್ದಾರೆ.
ಕೆರ್ಲಪಾಲ್ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿಯ ಆಧಾರದ ಮೇಲೆ ಶುಕ್ರವಾರ (ಮಾರ್ಚ್ 28) ರಾತ್ರಿ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು.