ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಐರನ್ ಬಾಕ್ಸ್ ಓವರ್ ಹೀಟ್ ಆಗಿ ಮನೆಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಮಲ್ಲೇಶ್ವರಂನ 13 ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಐರನ್ ಮಾಡಿ ಸ್ವಿಚ್ ಆಫ್ ಮಾಡಲು ಮರೆತಿದ್ದಾರೆ. ಪರಿಣಾಮ ಐರನ್ ಬಾಕ್ಸ್ ಓವರ್ ಹೀಟ್ ಆಗಿ ಬಟ್ಟೆಯೊಂದಕ್ಕೆ ಬೆಂಕಿ ತಗುಲಿ ಇಡೀ ಮನೆಗೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಪಾಯ ಸಂಭವಿಸಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

