HomeInternationalBIG UPDATE: ಮ್ಯಾನ್ಮಾರ್ ಭೂಕಂಪದಲ್ಲಿ ಮೃತರ ಸಂಖ್ಯೆ 1,644ಕ್ಕೆ ಏರಿಕೆ: 3,400 ಕ್ಕೂ ಹೆಚ್ಚು ಮಂದಿ...

BIG UPDATE: ಮ್ಯಾನ್ಮಾರ್ ಭೂಕಂಪದಲ್ಲಿ ಮೃತರ ಸಂಖ್ಯೆ 1,644ಕ್ಕೆ ಏರಿಕೆ: 3,400 ಕ್ಕೂ ಹೆಚ್ಚು ಮಂದಿ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಮ್ಯಾನ್ಮಾರ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದ ನಂತರ ದೇಶದ ಮಿಲಿಟರಿ ನೇತೃತ್ವದ ಸರ್ಕಾರ ಶನಿವಾರ 1,644 ಜನರು ಸಾವನ್ನಪ್ಪಿದ್ದಾರೆ ಮತ್ತು 3,400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಜನರು ಕಾಣೆಯಾಗಿದ್ದಾರೆ ಎಂದು ತಿಳಿಸಿದೆ.

ವಿವರವಾದ ಅಂಕಿಅಂಶಗಳನ್ನು ಇನ್ನೂ ಸಂಗ್ರಹಿಸಲಾಗುತ್ತಿದೆ ಎಂದು ಹೇಳಲಾಗಿದ್ದು, ಹಲವಾರು ಕಟ್ಟಡಗಳು ಕುಸಿದಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇತರ ಹಾನಿ ಕೂಡ ಆಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಭೂಕಂಪವು ನೆರೆಯ ಥೈಲ್ಯಾಂಡ್ ಅನ್ನು ಸಹ ನಡುಗಿಸಿದ್ದು, ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶುಕ್ರವಾರ ಮಧ್ಯಾಹ್ನ ಭೂಕಂಪವು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೇಯಿಂದ ಸ್ವಲ್ಪ ದೂರದಲ್ಲಿ ಕೇಂದ್ರಬಿಂದುವಾಗಿತ್ತು. ಸಾವು ಮತ್ತು ಗಾಯಾಳುಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮ್ಯಾನ್ಮಾರ್ ಮಿಲಿಟರಿ ಸರ್ಕಾರದ ಮುಖ್ಯಸ್ಥ, ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಹೇಳಿದ್ದಾರೆ.

ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ಎರಡರಲ್ಲೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ; ಹಲವಾರು ಶವಗಳು ಮತ್ತು ಗಾಯಗೊಂಡ ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಬ್ಯಾಂಕಾಕ್‌ನ ಜನಪ್ರಿಯ ಚತುಚಕ್ ಮಾರುಕಟ್ಟೆಯ ಬಳಿ, ನಿರ್ಮಾಣ ಹಂತದಲ್ಲಿದ್ದ 33 ಅಂತಸ್ತಿನ ಕಟ್ಟಡ ಕುಸಿದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular