
ಬೆಂಗಳೂರು: ಆಸ್ತಿ ತೆರಿಗೆ ಪಾವತಿಗೆ ಮಾರ್ಚ್ 31 ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ ಸಿಬ್ಬಂದಿಯ ರಜೆಯನ್ನು ರದ್ದು ಮಾಡಲಾಗಿದೆ.
ಬಿಬಿಎಂಪಿ ಸಿಬ್ಬಂದಿಗೆ ಯುಗಾದಿ ಮತ್ತು ರಂಜಾನ್ ರಜೆಯನ್ನು ರದ್ದು ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಮೌನೀಶ್ ಮೌದ್ಗೀಲ್ ಆದೇಶ ಹೊರಡಿಸಿದ್ದಾರೆ.
ಆಸ್ತಿ ತೆರಿಗೆ ಪಾವತಿಗೆ ಮಾರ್ಚ್ 31 ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ ಸಿಬ್ಬಂದಿಯ ಯುಗಾದಿ ಮತ್ತು ರಂಜಾನ್ ರಜೆಯನ್ನು ರದ್ದು ಮಾಡಲಾಗಿದೆ. ಸರ್ಕಾರಿ ಕಟ್ಟಡಗಳ ಒಟಿಎಸ್ ಪಾವತಿಗೂ ಮಾರ್ಚ್ 31 ಡೆಡ್ ಲೈನ್ ಆಗಿದೆ. ಹೀಗಾಗಿ ತೆರಿಗೆ ಪಾವತಿದಾರರಿಗೆ ಅನುಕೂಲವಾಗಲೆಂದು ಕ್ರಮ ಕೈಗೊಳ್ಳಲಾಗಿದೆ. ಕಂದಾಯ ವಿಭಾಗದ ಎಲ್ಲರೂ ಕೆಲಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.