
ಮಂಡ್ಯ: ಮಂಡ್ಯದಲ್ಲಿ ಯುವತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ನಾಗಮಂಗಲ ತಾಲೂಕಿನ ಚೋಳೇನಹಳ್ಳಿಯಲ್ಲಿ ಘಟನೆ ನಡೆದಿದೆ.
ಯುವತಿ ಮೇಲೆ ತೀವ್ರ ಹಲ್ಲೆ ಮಾಡಲಾಗಿದ್ದು, ಯುವತಿಯ ತುಟಿ ಕಟ್ ಆಗಿದ್ದು, ಹಲ್ಲುಗಳು ಮುರಿದಿವೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ವೈಷಮ್ಯದಿಂದ ಘಟನೆ ನಡೆದಿದೆ. ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಿಸಿದ್ದಕ್ಕೆ ಜೆಡಿಎಸ್ ಮುಖಂಡರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತ ಹಾಕಿಸಿದ್ದಕ್ಕೆ ಪ್ರಶಾಂತ್, ಪ್ರತಾಪ್, ರಾಜು, ಪ್ರಮೋದ್, ಹರೀಶ್ ಎಂಬುವರು ಹಲ್ಲೆ ಮಾಡಿದ್ದಾರೆ.
ಹಲ್ಲೆ ಸಂಬಂಧ ನಾಗಮಂಗಲ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ದೂರು ಕೊಟ್ಟಿದ್ದಕ್ಕೆ ರಘು, ವಿಕಾಸ್ ಕುಟುಂಬದವರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.