ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ನೋಡಿ ಅವರ ಪತ್ನಿ ಆತಂಕಗೊಂಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿತ್ತು.
ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ ತಮ್ಮ ವಿಶಿಷ್ಟ ಶೈಲಿಯ ಬ್ಯಾಟಿಂಗ್ ಮೂಲಕ ಗುಜರಾತ್ ಟೈಟಾನ್ಸ್ ಬೌಲರ್‌ಗಳ ಮೇಲೆ ದಾಳಿ ಮಾಡಿದರು. ಈ ವೇಳೆ 14ನೇ ಓವರ್‌ನಲ್ಲಿ ಪ್ರಸಿದ್ಧ್ ಕೃಷ್ಣ ಬೌಲಿಂಗ್‌ನಲ್ಲಿ ತಲೆಗೆ ಬಲವಾದ ಪೆಟ್ಟು ತಿಂದರು. ಪ್ರಸಿದ್ಧ್ ಕೃಷ್ಣ ಎಸೆದ ಶಾರ್ಟ್ ಸ್ಲೋವರ್ ಬಾಲ್ ಅನ್ನು ಸ್ಕೂಪ್ ಮಾಡಲು ಪ್ರಯತ್ನಿಸಿದ ಸೂರ್ಯಕುಮಾರ್ ಯಾದವ್ ಅವರ ಹೆಲ್ಮೆಟ್‌ನ ತುದಿಗೆ ಚೆಂಡು ಬಡಿದಿದೆ. ಇದರಿಂದ ಅವರು ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ.
ಈ ದೃಶ್ಯವನ್ನು ನೋಡಿದ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಮತ್ತು ಆಡಳಿತ ಮಂಡಳಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೊಹಮ್ಮದ್ ಸಿರಾಜ್ ಮತ್ತು ಹಾರ್ದಿಕ್ ಪಾಂಡ್ಯ ಅವರು ಸೂರ್ಯಕುಮಾರ್ ಬಳಿ ಧಾವಿಸಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಫಿಸಿಯೋಗಳು ಮೈದಾನಕ್ಕೆ ಬಂದರು. ಚೆಂಡು ಹೆಲ್ಮೆಟ್‌ಗೆ ಬಡಿದ ತಕ್ಷಣ ಅವರ ಪತ್ನಿ ಸ್ಟ್ಯಾಂಡ್‌ನಿಂದ ಆತಂಕದಿಂದ ನೋಡುತ್ತಿದ್ದರು. ಆದರೆ ಅದೃಷ್ಟವಶಾತ್ ಹೆಲ್ಮೆಟ್ ಗ್ರಿಲ್ ಅವರ ಕಣ್ಣನ್ನು ರಕ್ಷಿಸಿತು.
ಪೆಟ್ಟು ತಿಂದ ಬಳಿಕ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 48 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ ಒಂದು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳು ಸೇರಿದ್ದವು. ಅವರ ಔಟಾದ ಬಳಿಕ ಮುಂಬೈ ಇಂಡಿಯನ್ಸ್ ತಂಡವು ಸೋಲನ್ನು ಅನುಭವಿಸಿತು. ಗುಜರಾತ್ ಟೈಟಾನ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು 160 ರನ್‌ಗಳಿಗೆ ಕಟ್ಟಿಹಾಕಿ 36 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಪ್ರಸಿದ್ಧ್ ಕೃಷ್ಣ ಅವರು ನಾಲ್ಕು ಓವರ್‌ಗಳಲ್ಲಿ 18 ರನ್‌ಗಳಿಗೆ ಎರಡು ವಿಕೆಟ್ ಪಡೆದು ಅದ್ಭುತ ಬೌಲಿಂಗ್ ಮಾಡಿದರು.
— Drizzyat12Kennyat8 (@45kennyat7PM) March 29, 2025