
ರಾಯಚೂರು: ಬೀದಿನಾಯಿಗಳ ದಾಳಿಗೆ 6 ವರ್ಷದ ಬಾಲಕ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಸಬಲಿಂಗಸಗೂರಿನಲ್ಲಿ ನಡೆದಿದೆ.
ಬಹಿರ್ದೆಸೆಗೆಂದು ಹೋಗಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿಇತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ.
ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.