HomeKarnatakaBREAKING: ಓವರ್ ಟೇಕ್ ವೇಳೆ ಕಾರ್ ಡಿಕ್ಕಿ: ಮಹಿಳೆ ಸಾವು, ಮೂವರಿಗೆ ಗಾಯ

BREAKING: ಓವರ್ ಟೇಕ್ ವೇಳೆ ಕಾರ್ ಡಿಕ್ಕಿ: ಮಹಿಳೆ ಸಾವು, ಮೂವರಿಗೆ ಗಾಯ

ಹಾಸನ: ಓವರ್ ಟೇಕ್ ವೇಳೆ ಹಿಂಬದಿಯಿಂದ ಕಾರ್ ಗೆ ಮತ್ತೊಂದು ಕಾರ್ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲೂಕಿನ ಕಾರೇಕೆರೆ ಕೃಷಿ ಕಾಲೇಜು ಎದುರು ನಡೆದಿದೆ.

ಹಾಸನ ನಗರದ ಕೆ. ಹೊಸಕೊಪ್ಪಲು ನಿವಾಸಿ ಶಾಂತಮ್ಮ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಆಲ್ಟೋ ಮತ್ತು ವ್ಯಾಗನಾರ್ ಕಾರ್ ಗಳು ಅಪಘಾತಕ್ಕೀಡಾಗಿವೆ. ಕಾರೇಕೆರೆ ಬಳಿ ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular