HomeKarnatakaಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಗುಡ್ ನ್ಯೂಸ್ : ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2...

ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಗುಡ್ ನ್ಯೂಸ್ : ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ 2 TMC ನೀರು.!

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ. ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14ಟಿಎಂಸಿ ಅಗತ್ಯವಿದ್ದು, 3ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಎಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು. ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular