alex Certify BIG NEWS: ಕಾಂಗ್ರೆಸ್ ಮುಖಂಡನನ್ನು ಭೇಟಿಯಾದ ಉಚ್ಛಾಟಿತ ಶಾಸಕ ಯತ್ನಾಳ್: ಕುತೂಹಲ ಮೂಡಿಸಿದ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಮುಖಂಡನನ್ನು ಭೇಟಿಯಾದ ಉಚ್ಛಾಟಿತ ಶಾಸಕ ಯತ್ನಾಳ್: ಕುತೂಹಲ ಮೂಡಿಸಿದ ನಡೆ

ಹುಬ್ಬಳ್ಳಿ: ಬಿಜೆಪಿಯಿಂದ ಉಚ್ಛಾಟನೆಗೊಂಡ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಟೀವ್ ಆಗಿದ್ದು, ಇಂದು ಕೊಪ್ಪಳ ಪ್ರವಾಸ ಕೈಗೊಂಡಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಹುಬ್ಬಳ್ಳಿಇಯ ಖಾಸಗಿ ಹೋಟೆಲ್ ನಲ್ಲಿ ಶಾಸಕ ಯತ್ನಾಳ್, ಧಾರವಾಡ ಗ್ರಾಮೀಣ ಘಟಕದ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಕೆಲ ಕಾಲ ಇಬ್ಬರು ನಾಯಕರು ಸಮಾಲೋಚನೆ ನಡೆಸಿದ್ದಾರೆ.

ಯತ್ನಾಳ್ ಕಾಂಗ್ರೆಸ್ ನಾಯಕನನ್ನು ಭೇಟಿಯಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇನ್ನೊಂದೆಡೆ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಯತ್ನಾಳ್ ಅವರ ಮುಂದಿನ ನಡೆ ಏನಿರಬಹುದು? ಎಂಬ ಕುತೂಹಲ ಕೂಡ ಮೂಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...