HomeKarnatakaBIG NEWS: ತಾಯಿ ಸಾವಿನಿಂದ ಆಘಾತ: ಮನನೊಂದ ಮಗ ಆತ್ಮಹತ್ಯೆ

BIG NEWS: ತಾಯಿ ಸಾವಿನಿಂದ ಆಘಾತ: ಮನನೊಂದ ಮಗ ಆತ್ಮಹತ್ಯೆ

ಬೆಂಗಳೂರು: ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

24 ವರ್ಷದ ರಕ್ಷಕ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಾಲಬಾಧೆಗೆ ನೊಂದು ರಕ್ಷಕ್ ತಾಯಿ ಚಂದ್ರಿಕಾ ಒಂದುವರೆ ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ ಸಾವಿನ ಕೊರಗಲ್ಲೇ ಮಾನಸಿಕವಾಗಿ ನೊಂದಿದ್ದ ಯುವಕ ಈಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular