ನವದೆಹಲಿ : ಯುವ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು 2014 ರ ಬ್ಯಾಚ್ ನ ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿದ್ದಾರೆ.
ಮಾರ್ಚ್ 29 ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ ಜ್ಞಾಪಕ ಪತ್ರದ ಪ್ರಕಾರ, ಕ್ಯಾಬಿನೆಟ್ನ ನೇಮಕಾತಿ ಸಮಿತಿಯು ತಕ್ಷಣದಿಂದ ಜಾರಿಗೆ ಬರುವಂತೆ ಅವರ ನೇಮಕಾತಿಗೆ ಅನುಮೋದನೆ ನೀಡಿದೆ.
ತಿವಾರಿ ಯಾರು ..?
ತಿವಾರಿ 2013ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ರ್ಯಾಂಕ್ ಪಡೆದಿದ್ದರು. ಅವರು ವಾರಣಾಸಿಯ ಮೆಹ್ಮುರ್ಗಂಜ್ ಮೂಲದವರು – ಇದು 2014 ರಿಂದ ಪ್ರಧಾನಿಯವ ರ ಲೋಕಸಭಾ ಕ್ಷೇತ್ರವಾಗಿದೆ.
ತಿವಾರಿ ಅವರು ಜನವರಿ 6, 2023 ರಿಂದ ಪ್ರಧಾನಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 2022 ರಲ್ಲಿ ಪಿಎಂಒದಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇರಿದರು.ಈ ಹಿಂದೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದ ತಿವಾರಿ, ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು.
Nidhi Tewari appointed as Private Secretary to Prime Minister Narendra Modi. pic.twitter.com/erpTlJfjfn
— Press Trust of India (@PTI_News) March 31, 2025