ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.