
ಬೆಂಗಳೂರು: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ನಂಜಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದೆ.
ಹೇಮಾ (44) ಮೃತ ಮಹಿಳೆ. ಪತಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಪತಿ ಮನೆಯ ಪಕ್ಕದಲ್ಲಿಯೇ ಮತ್ತೋರ್ವ ಮಹಿಳೆಗೆ ಮನೆ ಮಾಡಿಕೊಟ್ಟಿದ್ದನಂತೆ. ಇದೇ ಕಾರಣಕ್ಕೆ ಪತ್ನಿ ಹಾಗೂ ಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೀಗ ಹೇಮಾ ಶವವಾಗಿ ಪತ್ತೆಯಾಗಿದ್ದಾರೆ.
ಮಗಳು ರಷ್ಯಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮಗಳ ಓದಿನ ವಿಚಾರವಾಗಿ ಹೇಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿ ಹೇಳಿದ್ದಾನೆ. ಆದರೆ ಹೇಮಾಳದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂಬುದು ಹೇಮಾಅ ಪೋಷಕರ ಆರೋಪ. ಮರಣೋತ್ತರ ಪರೀಕ್ಷೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.