
ಸಾಹಿಬ್‌ಗಂಜ್: ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಎರಡು ಸರಕು ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಲೋಕೋ ಪೈಲಟ್‌ಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಸಾಹಿಬ್ ಗಂಜ್ ನಲ್ಲಿ ಮಂಗಳವಾರ ಒಂದು ದೊಡ್ಡ ರೈಲು ಅಪಘಾತ ಸಂಭವಿಸಿದ್ದು, ಇದರ ಪರಿಣಾಮವಾಗಿ ಇಬ್ಬರು ಲೋಕೋ ಪೈಲಟ್‌ಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ ಸರಕು ರೈಲು ಖಾಲಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ.
ಮಾಹಿತಿಯ ಪ್ರಕಾರ, ಅಪಘಾತದಲ್ಲಿ ಕನಿಷ್ಠ ಐದು ರೈಲ್ವೆ ಕಾರ್ಮಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಜವಾನ್ ಕೂಡ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲಾ ವ್ಯಕ್ತಿಗಳು ಪ್ರಸ್ತುತ ಬರ್ಹೈಟ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ನಂತರ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖಾ ತಂಡ ತನಿಖೆ ಪ್ರಾರಂಭಿಸಿದೆ.
ಸಾಹಿಬ್‌ಗಂಜ್ ಜಿಲ್ಲೆಯ ಬರ್ಹೈಟ್ ಪೊಲೀಸ್ ಠಾಣೆ ಪ್ರದೇಶದ ಬಳಿಯ ಫರಕ್ಕಾ-ಲಾಲ್ಮಟಿಯಾ ಎಂಜಿಆರ್ ರೈಲ್ವೆ ಮಾರ್ಗದಲ್ಲಿ ಅಪಘಾತ ಸಂಭವಿಸಿದೆ. ಖಾಲಿ ಸರಕು ರೈಲು ಬರ್ಹೈಟ್ ಎಂಟಿಯಲ್ಲಿ ನಿಂತಿತ್ತು, ಲಾಲ್ಮಟಿಯಾದಿಂದ ಹೋಗುತ್ತಿದ್ದ ಕಲ್ಲಿದ್ದಲು ತುಂಬಿದ ಥ್ರೂ-ಪಾಸ್ ಸರಕು ರೈಲು ಬಲವಾಗಿ ಅದಕ್ಕೆ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ 3:30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.