
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಆರ್ ಪಿಸಿ ಲೇಔಟ್ ನಿವಾಸದಲ್ಲಿ ನಡೆದಿದೆ.
ಸಿದ್ದಮ್ಮ ಮೃತ ವೃದ್ಧೆ. ನಿನ್ನೆ ಮಧ್ಯಾಹ್ನ ಊಟದ ಬಳಿಕ ಸಿದ್ದಮ್ಮ ಮನೆಯಿಂದ ಹೊರಬಂದಿಲ್ಲ. ಇಂದು ಬೆಳಾಗಾಗುವಷ್ಟರಲ್ಲಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವೃದ್ಧೆಯ ಕಿವಿಯಲ್ಲಿರುವ ಓಲೆ ನಾಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವೃದ್ಧೆಯ ಸಾವು ಕೊಲೆಯೋ ಅಥವಾ ಸಹಜ ಸಾವೋ ಎಂಬ ಅನುಮಾನ ವ್ಯಕ್ತವಾಗಿದೆ.
ವಿಜಯನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶಿಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.