ಬೆಂಗಳೂರು : ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ 2 ನೇ ಹಂತದ ಎಕೆ ಕಾಲೋನಿಯಲ್ಲಿ ನಡೆದಿದೆ.
ನಿಖಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಈ ಕೊಲೆ ನಡೆದಿದೆ. ಬೈಕ್ ನಲ್ಲಿ ಬಂದ 4-5 ಜನರ ತಂಡ ಏಕಾಏಕಿ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.