
ಧಾರವಾಡ: ಧಾರವಾಡ ತಾಲೂಕಿನ ಜೋಗೆಲ್ಲಾಪುರ ಗ್ರಾಮದ ಬಳಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ತಹಶೀಲ್ದಾರ್ ದೊಡ್ಡಪ್ಪ ಹೂಗಾರ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಬನಶಂಕರಿ ಎಂಟರ್ಪ್ರೈಸಸ್ ಕಂಪನಿ ಗೋದಾಮಿನ ಮೇಲೆ ದಾಳಿ ಮಾಡಲಾಗಿದೆ. ಸಚಿನ್ ಸಜ್ಜನ್ ಗೆ ಸೇರಿದ ಬನಶಂಕರಿ ಎಂಟರ್ಪ್ರೈಸಸ್ ಕಂಪನಿಯಲ್ಲಿ ಅಕ್ರಮವಾಗಿ ಗ್ಯಾಸ್ ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, 470ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಅಲ್ಲದೇ, ಗೋದಾಮಿನಲ್ಲಿದ್ದ ಗ್ಯಾಸ್ ರೀಫಿಲ್ಲಿಂಗ್ ಯಂತ್ರ ಕೂಡ ವಶಕ್ಕೆ ಪಡೆಯಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.