HomeKarnatakaಬಂಗಾಳಕೊಲ್ಲಿಯಲ್ಲಿ ಚುರುಕಾದ ಮಳೆ ಮಾರುತ: ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆ...

ಬಂಗಾಳಕೊಲ್ಲಿಯಲ್ಲಿ ಚುರುಕಾದ ಮಳೆ ಮಾರುತ: ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಒಂದು ವಾರ ಕಾಲ ಭಾರಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಇದರಿಂದಾಗಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಂಗಳವಾರದಿಂದಲೇ ವಿವಿಧ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಬುಧವಾರ ಮತ್ತು ಗುರುವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳಿವೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಒಂದು ವಾರ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುವಾರದಿಂದ 4 ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಿಗೆ ಗುರುವಾರ ಒಂದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಾಧಾರಣ ಗಾಳಿ, ಗುಡುಗು, ಮಿಂಚು ಸಹಿತ ಮಳೆ ವಾರವಿಡೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular