ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏ.22 ಕ್ಕೆ ಮುಂದೂಡಿಕೆ ಮಾಡಿದೆ.
ನಟ ದರ್ಶನ್ ಜಾಮೀನು ರದ್ದುಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಏ.22 ಕ್ಕೆ ಮುಂದೂಡಿದೆ.
ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದ್ದು, ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದತಿಗೆ ರಾಜ್ಯ ಸರ್ಕಾರ ಕೋರಿದೆ. ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಇಂದು ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆದಿದ್ದು, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಏ.22 ಕ್ಕೆ ಮುಂದೂಡಿದೆ.