alex Certify BIG NEWS: ಹಲ್ಲೆಗೊಳಗಾದ ವ್ಯಕ್ತಿ ಸಾವು: PSI ಹಾಗೂ CPI ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಲ್ಲೆಗೊಳಗಾದ ವ್ಯಕ್ತಿ ಸಾವು: PSI ಹಾಗೂ CPI ಸಸ್ಪೆಂಡ್

ರಾಯಚೂರು: ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಹಲ್ಲೆಗೊಳಗಾಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್ ಐ ಮತ್ತು ಸಿಪಿಐ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಳ್ಳಾರಿ ವಲಯದ ಡಿಐಜಿಪಿ ಲೋಕೇಶ್ ಕುಮಾರ್ ಪಿಎಸ್ ಐ ಮಂಜುನಾಥ್ ಹಾಗೂ ಸಿಪಿಐ ನಾಗರಾಜ್ ಮೇಕಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೌಟುಂಬಿಕ ಕಲಹ ಪ್ರಕರಣದಲ್ಲಿ ವಿರೇಶ್ ಎಂಬುವವರನ್ನು ಮಹಿಳಾ ಠಾಗೆ ಹಾಗೂ ಪಶ್ಚಿಮ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಮಾರಣಂತಿಕ ಹಲ್ಲೆಗೊಳಗಾದ ವಿರೇಶ್ ಸಾವನ್ನಪ್ಪಿದ್ದರು. ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪಿಎಸ್ ಐ ಹಾಗೂ ಸಿಪಿಐ ಇಬ್ಬರನ್ನು ಸಸ್ಪೆಂಡ್ ಮಾಡಿ ತನಿಖೆಗೆ ಆದೇಶಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...