
ಬೆಳಗಾವಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾಅವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ (22) ಮೃತ ದುರ್ದೈವಿ. ಬೈಕ್ ನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.