HomeKarnatakaBIG NEWS : 'ತಂತ್ರಜ್ಞಾನಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಿ' : ರಾಜ್ಯದ ಪೊಲೀಸರಿಗೆ 'CM...

BIG NEWS : ‘ತಂತ್ರಜ್ಞಾನಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಿ’ : ರಾಜ್ಯದ ಪೊಲೀಸರಿಗೆ ‘CM ಸಿದ್ದರಾಮಯ್ಯ’ ಕರೆ

ಬೆಂಗಳೂರು : ಪೊಲೀಸ್ ಧ್ವಜ ದಿನಾಚರಣೆ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಚಿನ್ನದ ಪದಕ ನೀಡಿ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳಿಗೆ ಗೌರವಿಸಿ ಮಾತನಾಡಿದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ ಶ್ರಮ ಮತ್ತು ಸೇವೆ ಶ್ಲಾಘನೀಯ. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ.ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು. ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು. ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ ಎಂದರು.

ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular