HomeLive Newsಇಂದು ಪ್ರೊ ಕಬಡ್ಡಿಯ ಮೊದಲ ಎಲಿಮಿನೇಟರ್ ಪಂದ್ಯ

ಇಂದು ಪ್ರೊ ಕಬಡ್ಡಿಯ ಮೊದಲ ಎಲಿಮಿನೇಟರ್ ಪಂದ್ಯ

ಇಂದು ಶಿವ ಛತ್ರಪತಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ   ಪ್ರೊ ಕಬಡ್ಡಿಯ ಎಲಿಮಿನೇಟರ್ ಪಂದ್ಯಗಳು ನಡೆಯಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ  ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ಯೋಧಾಸ್ ಮತ್ತು ಜೈಪುರ್ ಪಿಂಕ್ ಪ್ಯಾಂಥರ್ಸ್ ಮುಖಾಮುಖಿಯಾಗುತ್ತಿವೆ.

ಯುಪಿ ಯೋಧಾಸ್ ತಂಡದಲ್ಲಿ ಮೂರು ರೈಡರ್ಗಳಿದ್ದರೆ, ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡದಲ್ಲಿ ರೈಡ್ ಮಷೀನ್ ಅರ್ಜುನ್ ದೇಸ್ವಾಲ್ ಒಬ್ಬರೇ ಏಕಾಂಗಿ ಹೋರಾಟ ನಡೆಸುವ ಮೂಲಕ ಅತಿ ವೇಗವಾಗಿ ಪಾಯಿಂಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

ಒಟ್ಟಾರೆ ಉಭಯ ತಂಡಗಳು ಬಲಿಷ್ಠವಾಗಿದ್ದು, ಯಾವ ತಂಡ ಸೆಮಿ ಫೈನಲ್ ಗೆ ಪ್ರವೇಶಿಸಲಿದೆ. ಕಾದುನೋಡಬೇಕಾಗಿದೆ. ಇದಾದ ಬಳಿಕ ಮತ್ತೊಂದು ಎಲಿಮಿನೇಟರ್ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್ ಹಾಗೂ ಯು ಮುಂಬಾ  ತಂಡ ಕಾದಾಡಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular