ಕಾಂಗ್ರೆಸ್ ಅಧಿವೇಶನದಲ್ಲಿ ಮಹಿಳೆಯರನ್ನು ತಳ್ಳಿದ್ರಾ DCM ಡಿಕೆ ಶಿವಕುಮಾರ್..? : ವಿಡಿಯೋ ಹಂಚಿಕೊಂಡ ಬಿಜೆಪಿ |VIDEO

ಬೆಂಗಳೂರು : ಕಾಂಗ್ರೆಸ್ ಅಧಿವೇಶನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಹಿಳೆಯರನ್ನು ತಳ್ಳಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದೆ.ಡಿಸಿಎಂ ಡಿಕೆ ಶಿವಕುಮಾರ್ ಗೂಂಡಾಗಳಂತೆ ವರ್ತಿಸುತ್ತಾರೆ ಮತ್ತು ತನ್ನ ಬಾಸ್ ಅನ್ನು ಸಮಾಧಾನಪಡಿಸಲು ಕಾಂಗ್ರೆಸ್ ಕಾರ್ಯಕರ್ತೆಯರನ್ನು ಪಕ್ಕಕ್ಕೆ ತಳ್ಳುತ್ತಾರೆ.ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರು ಅನುಭವಿಸಿದ ಅಗೌರವ ಇದು. ತಮ್ಮದೇ ಸದಸ್ಯರು ಇಂತಹ ಅವಮಾನವನ್ನು ಎದುರಿಸಿದರೆ, ಕಾಂಗ್ರೆಸ್ ಆಡಳಿತದಲ್ಲಿ ದೇಶಾದ್ಯಂತ ಮಹಿಳೆಯರು ಸುರಕ್ಷತೆಯನ್ನು ಹೇಗೆ ನಿರೀಕ್ಷಿಸಬಹುದು? ಎಂದು ಬಿಜೆಪಿ ಟ್ವೀಟ್ ಮಾಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read