HomeEntertainment'ಸಂಜು ವೆಡ್ಸ್ ಗೀತಾ 2' ಚಿತ್ರದ ವಿಡಿಯೋ ಹಾಡು ರಿಲೀಸ್

‘ಸಂಜು ವೆಡ್ಸ್ ಗೀತಾ 2’ ಚಿತ್ರದ ವಿಡಿಯೋ ಹಾಡು ರಿಲೀಸ್

ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ‘ಮಳೆಯಂತೆ ಬಾ’ ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

ಸಂಗೀತಾ ರವೀಂದ್ರನಾಥ್ ಈ ಹಾಡಿಗೆ ಧ್ವನಿಯಾಗಿದ್ದು, ವಿ. ಶ್ರೀಧರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಕವಿರಾಜ್ ಅವರ ಸಾಹಿತ್ಯವಿದೆ.

ಈ ಚಿತ್ರವನ್ನು ನಾಗಶೇಖರ್ ಮೂವೀಸ್ ಪ್ರೊಡಕ್ಷನ್ಸ್ ಹಾಗೂ ಮಹಾನದಿ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಚಲವಾದಿ ಕುಮಾರ್ ನಿರ್ಮಾಣ ಮಾಡಿದ್ದು, ಇಮ್ರಾನ್ ಸರ್ದಾರಿಯಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಅಂಥೋನಿ ಸಂಕಲನ, ಸತ್ಯ ಹೆಗಡೆ ಛಾಯಾಗ್ರಹಣ,ಇಮ್ರಾನ್ ಸರ್ದಾರಿಯಾ ಅವರ ನೃತ್ಯ ಸಂಯೋಜನೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular