HomeKarnatakaರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವು: ತಿಪಟೂರು ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮೃತಪಟ್ಟ ಬಾಣಂತಿ

ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವು: ತಿಪಟೂರು ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮೃತಪಟ್ಟ ಬಾಣಂತಿ

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಬಳಿಕ ಬಾಣಂತಿ ಮೃತಪಟ್ಟಿದ್ದಾರೆ.

ಫಿರ್ದೋಸ್(26) ಮೃತಪಟ್ಟ ಬಾಣಂತಿ. ಬೆಂಗಳೂರು ಡಿಜಿ ಹಳ್ಳಿ ಬಡಾವಣೆ ನಿವಾಸಿ ಫಿರ್ದೋಸ್ ಅವರು ಹೆರಿಗೆಗಾಗಿ ತಿಪಟೂರಿನ ತವರುಮನೆಗೆ ಆಗಮಿಸಿದ್ದರು. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಧ್ಯಾಹ್ನ ಸಿಸೇರಿಯನ್ ಮೂಲಕ ಹೇರಿಗೆ ಮಾಡಿಸಲಾಗಿದ್ದು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತಡರಾತ್ರಿ ಮೃತಪಟ್ಟಿದ್ದಾರೆ. ಶ್ವಾಸಕೋಶದ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿ(ಪಲ್ಮನರಿ ಎಂಬಾಲಿಸಮ್) ಬಾಣಂತಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular