HomeKarnatakaBIG NEWS: ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ

BIG NEWS: ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ

ಬೆಂಗಳೂರು: ಆಟೋ, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ವೀರಣ್ಣ (55) ಮೃತ ದುರ್ದೈವಿ. ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ವೀರಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಎ ವಿದ್ಯಾರ್ಥಿ ಸೇರಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವ ಗಾಯಾಳು ಸ್ಥಿತಿ ಚಿಂತಾಜನಕವಾಗಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular