HomeKarnatakaBIG BREAKING: ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧ

BIG BREAKING: ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್‌ 31 ರಂದು ರಾತ್ರಿ 11 ರಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ(ಕೆಐಎ ವಿಮಾನ ನಿಲ್ದಾಣಕ್ಕೆ ಹೋಗುವ ಎಲಿವೇಟೆಡ್‌ ಎಕ್ಸ್‌ ಪ್ರೆಸ್‌ವೇ ಹೊರತುಪಡಿಸಿ) ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ವಿಮಾನ ನಿಲ್ದಾಣದ ಎಲಿವೇಟೆಡ್‌ ಎಕ್ಸ್‌ ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ಡಿಸೆಂಬರ್‌ 31ರ ರಾತ್ರಿ 10 ರಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ನಿರ್ಬಂಧಿಸಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರಾದ ಎಂ.ಎನ್‌. ಅನುಚೇತ್‌ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular