HomeKarnatakaBIG NEWS: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

BIG NEWS: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಚಾಮರಾಜನಗರ:  ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ಜನವರಿ 9 ಅಥವಾ 16ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು. ನೂತನ ವರ್ಷಾರಂಭದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತಾದರೂ ದಿನಾಂಕ ನಿಗದಿಯಾಗಿರಲಿಲ್ಲ.

ಸಿಎಂ ಸಿದ್ದರಾಮಯ್ಯ ಅವರು ಜನವರಿ 9 ಅಥವಾ 16ರಂದು ಸಂಪುಟ ಸಭೆಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular