HomeKarnatakaರಾಜ್ಯದ ಬಸ್ ನಿಲ್ದಾಣಗಳಲ್ಲಿ ದೃಷ್ಟಿ ದೋಷವುಳ್ಳ ಪ್ರಯಾಣಿಕರಿಗೆ ಆಡಿಯೋ ವ್ಯವಸ್ಥೆ: ಹೈಕೋರ್ಟ್ ಆದೇಶ

ರಾಜ್ಯದ ಬಸ್ ನಿಲ್ದಾಣಗಳಲ್ಲಿ ದೃಷ್ಟಿ ದೋಷವುಳ್ಳ ಪ್ರಯಾಣಿಕರಿಗೆ ಆಡಿಯೋ ವ್ಯವಸ್ಥೆ: ಹೈಕೋರ್ಟ್ ಆದೇಶ

ಬೆಂಗಳೂರು: ದೃಷ್ಟಿ ದೋಷವುಳ್ಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಡಿಯೋ ವ್ಯವಸ್ಥೆ ಕಲ್ಪಿಸುವಂತೆ ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ದೃಷ್ಟಿ ದೋಷ ಇರುವವರಿಗೆ ಪ್ರಯಾಣದ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಬಸ್ ಸಂಚಾರದ ವಿವರಗಳ ಧ್ವನಿವರ್ಧಕ ಪ್ರಕಟಣೆಯ ಆಡಿಯೋ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

ಈ ಸಂಬಂಧ ದೃಷ್ಟಿ ದೋಷ ಹೊಂದಿರುವ ಹೈಕೋರ್ಟ್ ವಕೀಲ ಎನ್. ಶ್ರೇಯಸ್ ಮತ್ತು ಶ್ರೇಯಸ್ ಗ್ಲೋಬಲ್ ಟ್ರಸ್ಟ್ ಫಾರ್ ಸೋಷಿಯಲ್ ಕಾಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃತಿಕಾ ಅವರು ಸಲ್ಲಿಸಿದ್ದ ಪಿಎಎಲ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಆಂಜಾಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದಿಂದ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular